ಇಪಿಎಫ್ಓ ಅಧಿಕಾರಿಗಳ ವಿರುದ್ಧ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಪಿಎಸ್ 95 ಪಿಂಚಣಿದಾರರ ಪ್ರತಿಭಟನೆ

ಇಪಿಎಫ್ಓ ಅಧಿಕಾರಿಗಳ ವಿರುದ್ಧ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಇಪಿಎಸ್ 95 ಪಿಂಚಣಿದಾರರ ಪ್ರತಿಭಟನೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ರಾಷ್ಟ್ರೀಯ ಸಂಘರ್ಷ ಸಮಿತಿ ಹಾಗು ಬಿಎಂಟಿಸಿ, ಕೆಎಸ್ಆರ್ಟಿಸಿ ವತಿಯಿಂದ ಆಯೋಜಿಸಿದ್ದ, ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ನಗರದ ರಿಚ್ಮಂಡ್ ವೃತ್ತದಲ್ಲಿರುವ, ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಏಪ್ರಿಲ್ 29ರಂದು,  ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಂದು ಜರುಗಿತು. ಶಿಸ್ತು ಮತ್ತು ಸಂಹ್ಯಾಮಕ್ಕೆ ಹೆಸರಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗು ಇತರೆ ಕಂಪನಿಗಳ ನಿವೃತ್ತರ ನೌಕರರ ಆಕ್ರೋಶದ ಕಟ್ಟೆ ಒಡೆದಿತ್ತು. ನೂರಾರು ನಿವೃತ್ತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ಕಚೇರಿ ಆವರಣದಲ್ಲಿ ಅಧಿಕಾರಿಗಳ ವಿರುದ್ಧ ಕೂಗಿದ ಧಿಕ್ಕಾರದ ಘೋಷಣೆ ಮುಗಿಲು ಮುಟ್ಟಿತು.

   ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪನವರು, ಎಲ್ಲಾ ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ಸ್ವಾಗತಿಸಿ, ಹೋರಾಟದ ರೂಪುರೇಷೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

.      ಕಾರ್ಯಾಧ್ಯಕ್ಷರಾದ ನಂಜುಂಡೇಗೌಡ ರವರು ಮಾತನಾಡಿ, ಇಪಿಎಫ್ಓ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿದ್ದು, ನಿವೃತ್ತರ ವಿವಿಧ ಬೇಡಿಕೆಗಳ ಬಗ್ಗೆ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ತಾವು ಈವರೆಗೂ ನೀಡಿರುವ ಮನವಿ ಪತ್ರಗಳಿಗೆ ಅಧಿಕಾರಿಗಳು ಸ್ಪಂದಿಸದೆ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುತ್ತಾರೆ.

.   ಎನ್ಎಸಿ ರಾಜ್ಯಾಧ್ಯಕ್ಷರಾದ ಜಿಎಸ್ಎಂ ಸ್ವಾಮಿರವರು ಮಾತನಾಡಿ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನವದೆಹಲಿಯಲ್ಲಿ, ರಾಷ್ಟ್ರೀಯ ಸಂಘರ್ಷ ಸಮಿತಿ ನಡೆಸಿದ ಹೋರಾಟದ ಸಂಪೂರ್ಣ ಚಿತ್ರಣವನ್ನು ಸಭೆಯಲ್ಲಿ ಪ್ರಸ್ತಾಪಿಸಿ, ನಿವೃತ್ತರು ಧೃತಿಗೆಡುವುದು ಬೇಡ, ಹೊಸ ಸರ್ಕಾರ ರಚನೆಯಾದ ಕೂಡಲೇ ನಮ್ಮ ಎಲ್ಲ ಬೇಡಿಕೆಗಳು ಈಡೇರಿಲ್ಲಿವೆ, ಎಂಬ ಆಶಾಭಾವನೆ ವ್ಯಕ್ತಪಡಿಸಿರುತ್ತಾರೆ.

.     ಅಧ್ಯಕ್ಷರಾದ ಶಂಕರ್ ಕುಮಾರ್ ಮಾತನಾಡಿ, ಇಷ್ಟು ವರ್ಷಗಳ ಕಾಲ ನಿರಂತರವಾಗಿ ನಿವೃತ್ತರು ಹೋರಾಟ ನಡೆಸಿದ್ದು, ನಾವು ಗುರಿ ಮುಟ್ಟಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದಿರುತ್ತಾರೆ. ಉಪಾಧ್ಯಕ್ಷರಾದ ಸುಬ್ಬಣ್ಣ ಮಾತನಾಡಿ, ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು, ಎನ್ಎಸಿ ರಾಷ್ಟ್ರೀಯ ಸಂಯೋಜಕರಾದ ರಮಾಕಾಂತ ನರಗುಂದ ರವರು ಶೀಘ್ರ ಗುಣಮುಖರಾಗಿ, ನಮ್ಮ ಮುಂದಿನ ಹೋರಾಟಕ್ಕೆ ಮಾರ್ಗದರ್ಶನ ನೀಡಬೇಕು ಎಂದಿರುತ್ತಾರೆ.

.    ಮಂಡ್ಯ ಎನ್ಎಸಿ ಉಪಾಧ್ಯಕ್ಷರಾದ ಹುಚ್ಚಪ್ಪ, ಹಾಗೂ, ಚಿಕ್ಕಬಳ್ಳಾಪುರ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಅಧ್ಯಕ್ಷರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಅಂತಿಮವಾಗಿ ಸ್ಥಳಕ್ಕಾಗಮಿಸಿದ ಇಪಿಎಫ್ಓ ಅಧಿಕಾರಿಗಳು ನಮ್ಮ ಮನವಿಪತ್ರವನ್ನು ಸ್ವೀಕರಿಸಿ, ಅದಕ್ಕೆ ಪ್ರತಿಕ್ರಿಯಿಸಿದ್ದು, ನಮ್ಮ ಎಲ್ಲ ಮನವಿ ಪತ್ರಗಳನ್ನು, ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿಕೊಟ್ಟಿದ್ದು, ಅದರ ಎಲ್ಲಾ ವಿವರಗಳನ್ನು ನೀಡುವುದಾಗಿ, ಇಂದಿನ ಮನವಿ ಪತ್ರವನ್ನು ಸಹ ತಮ್ಮ ಉಲ್ಲೇಖದೊಂದಿಗೆ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ. ಇಂದಿನ ಸಭೆಯ ನಿರ್ವಹಣೆಯನ್ನು ಪದಾಧಿಕಾರಿಗಳಾದ ನಾಗರಾಜುರವರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿಕೊಟ್ಟರು. ಪ್ರತಿಭಟನಾ ಸಭೆ ಅತ್ಯಂತ ಆವೇಶ ಭರಿತವಾಗಿದ್ದು ಕೇಂದ್ರ ಸರ್ಕಾರಕ್ಕೆ ಇದೊಂದು ಎಚ್ಚರಿಕೆ ಗಂಟೆ ಆಗಿರುತ್ತದೆ ಎಂದು, ನಂಜುಂಡೇಗೌಡ ರವರು ತಿಳಿಸಿದರು.