ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ರವರಿಂದ ಸಭೆ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ರವರಿಂದ ಸಭೆ
ಬೆಂಗಳೂರು: ಲೋಕಸಬಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸ್ವೀಪ್ ಚಟುವಟಿಕೆಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ವಿಡಿಯೋ ಸಂವಾದದ(Video Conference) ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬರುವ ಆಯಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಿ ಮೈಕ್ರೊ ಲೆವೆಲ್ ಯೋಜನೆಗಳನ್ನು ರೂಪಿಸಿಕೊಂಡು ಸ್ವೀಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತದಾನದ ಪ್ರಮಾಣವನ್ನು ಶೇಖಡವಾರು ಹೆಚ್ಚಿಸುವ ನಿಟ್ಟಿನಲ್ಲಿ ನಗರಾದ್ಯಂದ ವ್ಯವಸ್ಥಿತ ಯೋಜನೆ ರೂಪಿಸಿಕೊಂಡು ವಿವಿಧ ರೀತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಮಾತುಕತೆ ನಡೆಸಿ ಮತದಾನದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.
ಚುನಾವಣಗೆ ಸಂಬಂಧಿಸಿದ ಅರ್ಜಿ ವಿಲೇವಾಗಳನ್ನು ತ್ವರಿತವಾಗಿ ಮುಗಿಸಬೇಕು. ಮತದಾನದ ಚೀಟಿಗಳನ್ನು ಮತದಾರ ಮನೆಗಳಿಗೆ ತ್ವರಿತವಾಗಿ ತಲುಪಿಸಲು ಸೂಕ್ತ ಕ್ರಮ ಕ್ರಮ ಕೈಗೊಳ್ಳಬೇಕು. 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಗೆ ಹೆಚ್ಚು ಆದ್ಯತೆ ನೀಡಿ ಮನೆ-ಮನೆ ಭೇಟಿ ನೀಡಿ 12ಡಿ ನಮೂನೆ ಮೂಲಕ ಭರ್ತಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮರಣ ಹೊಂದಿದವರ ಮನೆಯವರಿಂದ ಮರಣ ಹೊಂದಿರುವ ಬಗ್ಗೆ ಖಾತರಿಪಡಿಸಿಕೊಂಡು ಪತ್ರ, ಮರಣ ಪ್ರಮಾಣ ಪತ್ರವನ್ನು ಸಂಗ್ರಹಿಸುವುದು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮೃತಪಟ್ಟಿರುವ ಬಗ್ಗೆ ಖಾತರಿಪಡಿಸಿಕೊಂಡು ನಮೂನೆ 7ನ್ನು ನೀಡಿ ಮತದಾರರ ಪಟ್ಟಿಯಿಂದ ತೆಗೆಯುವ ಕಾರ್ಯ ಸರಿಯಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಬೂತ್ ಮಟ್ಟದಲ್ಲಿ ಚುನಾವಣಾ ನಿರ್ವಹಣಾ ಕಾರ್ಯಗಳನ್ನು ಸರಿಯಾಗಿರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ವೀಡಿಯೋ ಸಂವಾದದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ವಿನೋತ್ ಪ್ರಿಯಾ, ಸ್ನೇಹಲ್, ಡಾ. ಕೆ. ದಯಾನಂದ್, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, ಸಹಾಯಕ ಚುನಾವಣಾಧಿಕಾರಿಗಳು, ಮತದಾರರ ನೋಂದಣಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.